ಶಿವಮೊಗ್ಗ, ಸೆಪ್ಟಂಬರ್ 02: ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಸ್ತೂರಬಾ ಬಾಲಿಕ ಪದವಿ ಪೂರ್ವ ಕಾಲೇಜು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸೆ. 04 ರಂದು ಬೆಳಗ್ಗೆ 10.00ಕ್ಕೆ ನಗರದ ಕಸ್ತೂರಬಾ ಬಾಲಿಕ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಪೋಕ್ಸೋ ಕಾಯ್ದೆ -2012, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಹಾಗೂ ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಇರುವ ಕಾಯ್ದೆಗಳು ಹಾಗೂ ಪುನರ್ವಸತಿ ಯೋಜನೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿ.ಕಾ.ಸೇ.ಪ್ರಾ.ದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್. ಉದ್ಘಾಟಿಸುವರು. ಕ.ಬಾ.ಪ.ಪೂ. ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಎಸ್.ಆರ್. ಅಧ್ಯಕ್ಷತೆ ವಹಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖರವರಿಂದ ಪ್ರಾಸ್ತಾವಿಕ ನುಡಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ ಬಿ.ಹೆಚ್., ಪ.ಪೂ.ಶಿ.ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಎಸ್. ಗುಂಡಪಲ್ಲಿ, ಜಿಲ್ಲಾ ನಿರೂಪಣಾ ಅಧಿಕಾರಿ ಡಾ. ಸಂತೋಷ್ ಕುಮಾರ್ ಹೆಚ್. ಇವರುಗಳು ಉಪಸ್ಥಿತರಿರಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಿಮ್ಸ್ ಪ್ರಾಧ್ಯಾಪಕಿ ಹಾಗೂ ಪ್ರಸೂತಿ ತಜ್ಞೆ ಡಾ. ಸ್ವಾತಿ ಕಿಶೋರ್‌ರವರಿಮದ ರಕ್ತಹೀನತೆ, ಋತುಸ್ರಾವದ ಶುಚಿತ್ವದ ಕುರಿತು, ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಮಿಷನ್ ಸಂಯೋಜಕ ತಾಜುದ್ದೀನ್ ಖಾನ್‌ರವರಿಂದ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆಯ ಕಾರಣ ಮತ್ತು ದುಷ್ಪರಿಣಾಗಳು ಕುರಿತು ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜೆಂಡರ್ ಸ್ಪೆಷಲಿಸ್ಟ್ ರಮ್ಯಾ ಆರ್.ರವರಿಂದ ಮಿಷನ್ ಶಕ್ತಿ ಯೋಜನೆ ಕುರಿತು ವಿಚಾರ ಗೋಷ್ಠಿ ಹಮ್ಮಿಕೊಳ್ಳಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಉಚಿತ ಸಹಾಯವಾಣಿ-181 ಮತ್ತು ಮಕ್ಕಳ ಸಹಾಯವಾಣಿ 1098 ನ್ನು ಸಂಪರ್ಕಿಸುವುದು.
