ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ – ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು


 

ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ – ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು





ಬೆಂಗಳೂರು, ಮಾರ್ಚ್ 21:
ರಾಜ್ಯದಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಬೆಂಗಳೂರು ಉತ್ತರ ಜಿಲ್ಲೆಯ ಮಲ್ಲೇಶ್ವರಂನ ಕರ್ನಾಟಕ ಪಬ್ಲಿಕ್ ಶಾಲೆಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಭೇಟಿ ನೀಡಿದರು.

ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ಮೂಲಕ ಪುಷ್ಪ ನೀಡಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ, ಪರೀಕ್ಷಾ ಸಿದ್ಧತಾ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಕೊಠಡಿಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅನುದೇಶ ನೀಡಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ,
"ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸುತ್ತಿರುವ ನನ್ನೆಲ್ಲಾ ಆತ್ಮೀಯ ವಿದ್ಯಾರ್ಥಿಗಳು, ಭಯ, ಆತಂಕ ಬಿಟ್ಟು ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆಗೆ ಹಾಜರಾಗಿರಿ. ನಿಮ್ಮ ಪರಿಶ್ರಮಕ್ಕೆ ಕಡ್ಡಾಯವಾಗಿ ಉತ್ತಮ ಫಲಿತಾಂಶ ಸಿಗುವುದು. ನಿಮಗೆ ನನ್ನ ಹಾರ್ದಿಕ ಶುಭಾಶಯಗಳು!" ಎಂದು ತಿಳಿಸಿದ್ದಾರೆ.

ವರದಿ: ಡಿ.ಪಿ. ಅರವಿಂದ್



Post a Comment

Previous Post Next Post