ಎಸ್.ಟಿ. ಆನಂದರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ:ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಇಲಾಖೆಯಿಂದ ಗೌರವ.

ಎಸ್.ಟಿ. ಆನಂದರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ: ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಇಲಾಖೆಯಿಂದ ಗೌರವ




ಶಿವಮೊಗ್ಗ: 2024-25 ನೇ ಸಾಲಿನ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಇಲಾಖೆಯಿಂದ ಶಿವಮೊಗ್ಗದ ಎಸ್.ಟಿ. ಆನಂದ ಅವರ ಅತ್ಯಮೂಲ್ಯ ಸೇವೆಯನ್ನು ಪರಿಗಣಿಸಿ, ಅವರಿಗಾಗಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಮಾಡಲಾಗಿದೆ.

ಎಸ್.ಟಿ. ಆನಂದ ಅವರು ತಿಪ್ಪೆಸ್ವಾಮಿ ಮತ್ತು ಶ್ರೀಮತಿ ಉಷಾ ಎಸ್.ಟಿ. ಅವರ ಪುತ್ರರಾಗಿದ್ದು, ಇವರು ತಮ್ಮ ಶ್ರೇಷ್ಠ ಸೇವೆ, ಪ್ರಾಮಾಣಿಕತೆ ಹಾಗೂ ಉತ್ತಮ ಕಾರ್ಯನಿರ್ವಹಣೆಯಿಂದ ಪೌರರಕ್ಷಣೆ ಹಾಗೂ ಗೃಹರಕ್ಷಕ ದಳದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಸೇವೆಯನ್ನು ಗುರುತಿಸಿ, ಸರ್ಕಾರವು ಮುಖ್ಯಮಂತ್ರಿಗಳ ಚಿನ್ನದ ಪದಕ ನೀಡಿ ಗೌರವಿಸಿದೆ.

ಈ ಗೌರವ ಪಡೆದ ಹಿನ್ನೆಲೆಯಲ್ಲಿ ಗೃಹರಕ್ಷಕ ದಳದ ಜಿಲ್ಲಾ ಘಟಕದ ಅಧಿಕಾರಿಗಳು ಹಾಗೂ ಪೌರರಕ್ಷಣೆ ಇಲಾಖೆಯ ಅಧಿಕಾರಿಗಳು ಅವರ ಸಾಧನೆಯನ್ನು ಮೆಚ್ಚಿ ಅಭಿನಂದನೆ ಸಲ್ಲಿಸಿದ್ದಾರೆ.

ಎಸ್.ಟಿ. ಆನಂದ ಅವರ ಈ ಸಾಧನೆ ಜಿಲ್ಲೆಗೆ ಹೆಮ್ಮೆ ತರುತ್ತಿದ್ದು, ಅವರ ಮುಂದಿನ ಭವಿಷ್ಯ ಇನ್ನಷ್ಟು ಉಜ್ವಲವಾಗಿರಲಿ ಎಂದು ಎಲ್ಲರೂ ಹಾರೈಸಿದ್ದಾರೆ.

ವರದಿ: ಡಿ.ಪಿ ಅರವಿಂದ್

Post a Comment

Previous Post Next Post