ಮಲೆಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ – ಮುಖ್ಯಮಂತ್ರಿ ಸಿದ್ದರಾಮಯ್ಯ

 

ಮಲೆಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ – ಮುಖ್ಯಮಂತ್ರಿ ಸಿದ್ದರಾಮಯ್ಯ


ಚಾಮರಾಜನಗರ, ಏಪ್ರಿಲ್ 25: ಮಲೆಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಮದ್ಯ ನಿಷೇಧ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದು ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ದೇವಸ್ಥಾನದಲ್ಲಿ ಲಾಡು ಪ್ರಸಾದವನ್ನು ಗುಣಮಟ್ಟದಲ್ಲಿ ಹಾಗೂ ಕಡಿಮೆ ದರದಲ್ಲಿ ನೀಡಬೇಕು, ಸನ್ನಿಧಿಯ ಸುತ್ತಮುತ್ತಲ ಪ್ರದೇಶದಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು” ಎಂದು ಹೇಳಿದರು.

ಮೌಢ್ಯಗಳ ವಿರುದ್ಧ ತೀವ್ರ ವಾಗ್ದಾಳಿ:

ಚಾಮರಾಜನಗರ ಜಿಲ್ಲೆ ಹಿಂದುಳಿದ ಪ್ರದೇಶವಾಗಿದ್ದು, ಈ ಭಾಗದ ಅಭಿವೃದ್ಧಿಗೆ ವಿಶೇಷ ಗಮನ ಹರಿಸಲಾಗಿದೆ. “ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ನಂಬಿಕೆ ಸತ್ಯಕ್ಕೆ ದೂರ. ಇಂತಹ ಮೌಢ್ಯಗಳು ಸಮಾಜದ ಪ್ರಗತಿಗೆ ಮಾರಕ. ನಾನು 20 ಬಾರಿ ಈ ಜಿಲ್ಲೆಗೆ ಬಂದಿದ್ದೇನೆ, ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ” ಎಂದು ಹೇಳಿದ್ದಾರೆ.


ಇಡಿ ದಾಳಿ – ಕೇಂದ್ರದ ದ್ವೇಷದ ರಾಜಕಾರಣ?

ಶಾಸಕ ವಿನಯ್ ಕುಲಕರ್ಣಿಯವರ ಮನೆ ಮೇಲೆ ಇಡಿ ದಾಳಿ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯವನ್ನು ದ್ವೇಷದ ರಾಜಕಾರಣಕ್ಕಾಗಿ ಬಳಸುತ್ತಿದೆ. ಬಿಜೆಪಿ ನಾಯಕರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ” ಎಂದು ಆರೋಪಿಸಿದರು.

ಕೇಂದ್ರ ಗುಪ್ತಚರ ವೈಫಲ್ಯ:

ಪ್ರಧಾನಿ ಮೋದಿಯವರು ಕಾಶ್ಮೀರದ ಉಗ್ರ ದಾಳಿಗೆ ತಕ್ಕ ಪ್ರತಿಸ್ಪಂದನೆ ನೀಡುವುದಾಗಿ ಹೇಳಿರುವುದರ ಬಗ್ಗೆ ಮಾತನಾಡಿದ ಅವರು, ಈ ದಾಳಿಯಲ್ಲಿ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯ ಸ್ಪಷ್ಟವಾಗಿ ಕಂಡುಬರುತ್ತಿದೆ ಎಂದು ವಾದಿಸಿದರು.




Post a Comment

Previous Post Next Post