ರಸ್ತೆಗೆ ವಿದ್ಯುತ್ ದೀಪಗಳನ್ನು ಅಳವಡಿಸಿ: ಎಸ್‌ಡಿಪಿಐ ಮನವಿ

 ರಸ್ತೆಗೆ ವಿದ್ಯುತ್ ದೀಪಗಳನ್ನು ಅಳವಡಿಸಿ: ಎಸ್ಡಿಪಿಐ ಮನವಿ


                                            

ಶಿವಮೊಗ್ಗ, .18:
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.31 ನಾರಾಯಣ ಹೃದಯಾಲಯದ ಪಕ್ಕದಿಂದ ರಾಮೇನಕೊಪ್ಪ ಕಡೆಗೆ ಹೋಗುವ ರಸ್ತೆ ಸಂಪೂರ್ಣ ಕತ್ತಲಲ್ಲಿ ಮುಳುಗಿರುವ ಹಿನ್ನೆಲೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವತಿಯಿಂದ ಇಂದು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಸುಮಾರು 55 ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿದ್ದರೂ, ಕೇವಲ 5 ಕಂಬಗಳಲ್ಲಿ ಮಾತ್ರ ವಿದ್ಯುತ್ ದೀಪಗಳು ಕಾರ್ಯನಿರ್ವಹಿಸುತ್ತಿವೆ. ಇದರಿಂದ ಮಹಿಳೆಯರು, ಮಕ್ಕಳು ಹಾಗೂ ವಯಸ್ಕರು ರಾತ್ರಿ ವೇಳೆ ಸಂಚರಿಸಲು ತೊಂದರೆ ಅನುಭವಿಸುತ್ತಿದ್ದಾರೆ. ಅಲ್ಲದೆ, ರಸ್ತೆ ಮಧ್ಯದಲ್ಲಿ ಜಾನುವಾರುಗಳು ಓಡಾಡುವುದು, ರಸ್ತೆ ಪಕ್ಕದಲ್ಲಿ ಗಿಡಮರಗಳು ಬೆಳೆದಿರುವುದು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ.

ಸಾರ್ವಜನಿಕರ ಅನುಕೂಲಕ್ಕಾಗಿ ತಕ್ಷಣ ಬೀದಿ ದೀಪಗಳನ್ನು ಅಳವಡಿಸುವಂತೆ ಎಸ್ಡಿಪಿಐ ಮನವಿಯಲ್ಲಿ ಒತ್ತಾಯಿಸಲಾಗಿದೆ. " ರಸ್ತೆಯ ಕತ್ತಲಿನ ವಾತಾವರಣ ಕಳ್ಳರಿಗೆ ಅನುಕೂಲವಾಗಿರುವುದರಿಂದ, ನಾಗರಿಕರ ಸುರಕ್ಷತೆಗಾಗಿ ತುರ್ತು ಕ್ರಮ ಕೈಗೊಳ್ಳಬೇಕು" ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಎಸ್ಡಿಪಿಐ ಶಿವಮೊಗ್ಗ ಜಿಲ್ಲಾ ಪ್ರ.ಕಾರ್ಯದರ್ಶಿ ಇಮ್ರಾನ್ ಅಹ್ಮದ್, ಜಿಲ್ಲಾ ಕಾರ್ಯದರ್ಶಿ ಮನ್ಸೂರ್ ಅಲಿಖಾನ್, ರಾಮೇನಕೊಪ್ಪ ನಿವಾಸಿಗಳಾದ ಮುಜಾಹಿದ್, ಬರ್ಕತ್, ಅದ್ನಾನ್ ಉಪಸ್ಥಿತರಿದ್ದರು.

📌 ವರದಿ: ಡಿ.ಪಿ. ಅರವಿಂದ್



Post a Comment

Previous Post Next Post