ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿತನಿಗೆ 30 ವರ್ಷದ ಜೈಲು ಶಿಕ್ಷೆ

ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿತನಿಗೆ 30 ವರ್ಷದ ಜೈಲು ಶಿಕ್ಷೆ



ಶಿವಮೊಗ್ಗ, ಭದ್ರಾವತಿ:
2023ನೇ ಸಾಲಿನಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 21 ವರ್ಷದ ವ್ಯಕ್ತಿಯೊಬ್ಬನು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಭದ್ರಾವತಿ ನ್ಯೂಟೌನ್‌ ಪೊಲೀಸ್ ಠಾಣೆಯಲ್ಲಿ ಪೋಕೊ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಇಂದು ಮಹತ್ವದ ತೀರ್ಪು ಹೊರಬಿದ್ದಿದೆ.

ಬಾಲಕಿ ನೀಡಿದ ದೂರಿನ ಮೇರೆಗೆ ನ್ಯೂಟೌನ್‌ ಪೊಲೀಸ್‌ ಠಾಣೆಯಲ್ಲಿ ಪೋಕೊ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ಭದ್ರಾವತಿ ನಗರ ವೃತ್ತದ ಸಿಪಿಐ ಶ್ರೀ ಶ್ರೀಶೈಲ ಕುಮಾರ ಜೆ. ಅವರು ಸಂಪೂರ್ಣ ತನಿಖೆ ನಡೆಸಿ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.


ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀ ಶ್ರೀಧರ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದು, ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿತನ ಮೇಲೆ ಆರೋಪಗಳು ದೃಢಪಟ್ಟಿವೆ.

ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ (FTSC–1) ರ ಮಾನ್ಯ ನ್ಯಾಯಾಧೀಶರಾದ ಶ್ರೀ ನಿಂಗನಗೌಡ ಭ. ಪಾಟೀಲ್ ಅವರು ಆರೋಪಿತನಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1,85,000 ದಂಡ ವಿಧಿಸಿರುವುದಾಗಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಬಾಲಕಿಯ ನ್ಯಾಯಕ್ಕಾಗಿ ದೃಢವಾದ ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳು ಹಾಗೂ ನ್ಯಾಯದ ಹೋರಾಟ ಮುಂದುವರಿಸಿದ ಸರ್ಕಾರಿ ಅಭಿಯೋಜಕರ ಕಾರ್ಯವನ್ನು ಸ್ಥಳೀಯರು ಪ್ರಶಂಸಿಸಿದ್ದಾರೆ.



Post a Comment

Previous Post Next Post