HALನಲ್ಲಿ ಮಾಜಿ ಸೈನಿಕರಿಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗಾವಕಾಶ
ಶಿವಮೊಗ್ಗ, ಡಿಸೆಂಬರ್ 16 :
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL), ಬೆಂಗಳೂರು ಇಲ್ಲಿ ಮಾಜಿ ಸೈನಿಕರಿಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸೆಕ್ಯೂರಿಟಿ ಗಾರ್ಡ್ ಹಾಗೂ ಫೈರ್ಮನ್ ಹುದ್ದೆಗಳಿಗೆ ನಾಲ್ಕು ವರ್ಷಗಳ ಅವಧಿಗೆ ನೇಮಕಾತಿ ನಡೆಯಲಿದೆ.
ನೇಮಕಾತಿಯು ದೈಹಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆಗಳ ಮೆರಿಟ್ ಆಧಾರದಲ್ಲಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಆಯ್ಕೆಯಾದವರಿಗೆ ತಿಂಗಳಿಗೆ ರೂ.21,000 ಮೂಲ ವೇತನ ನೀಡಲಾಗುವುದರ ಜೊತೆಗೆ ತುಟ್ಟಿ ಭತ್ಯೆ ಹಾಗೂ ಇತರೆ ಭತ್ಯೆಗಳೂ ಲಭ್ಯವಿರುತ್ತವೆ.
ಈ ಹುದ್ದೆಗಳಿಗೆ ಆಸಕ್ತಿಯಿರುವ ಮಾಜಿ ಸೈನಿಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಿಂದ ನಿಗದಿತ ನಮೂನೆಯ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 26ರೊಳಗೆ ಸಲ್ಲಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ: 08182-220925 ಅನ್ನು ಸಂಪರ್ಕಿಸಬಹುದು.


