ಫೆ. 06 ಮತ್ತು 07ರಂದು ಶಿವಮೊಗ್ಗ ನಗರದಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ, ಫೆ. 04 (ಎಫ್7 ನ್ಯೂಸ್):
ಶಿವಮೊಗ್ಗ ನಗರ ಉಪವಿಭಾಗ–1ರ ಘಟಕ–2 ವ್ಯಾಪ್ತಿಯಲ್ಲಿ ಫೆಬ್ರವರಿ 06 ಹಾಗೂ 07ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಚನ್ನಪ್ಪ ಲೇಔಟ್, ಎ.ಎನ್.ಕೆ ರಸ್ತೆ, ಗಾಂಧಿನಗರ, ಅಚ್ಯುತ್‌ರಾವ್ ಲೇಔಟ್, ಜಿಲ್ಲಾ ಪಂಚಾಯತ್ ಮುಖ್ಯರಸ್ತೆ, ಕುವೆಂಪು ರಸ್ತೆ, ಸವಳಂಗ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ನಿರ್ವಹಣಾ ಕಾಮಗಾರಿಗೆ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಮನವಿ ಮಾಡಿದೆ.

