ಶಿವಮೊಗ್ಗ ಜಿಲ್ಲೆಯಲ್ಲಿ ಏ.23–24ರಂದು ಸಿಇಟಿ ಪರೀಕ್ಷೆ: 29 ಕೇಂದ್ರಗಳಲ್ಲಿ 9,864 ವಿದ್ಯಾರ್ಥಿಗಳು ಪರೀಕ್ಷೆಗೆ

ಶಿಸ್ತುಬದ್ಧ ಹಾಗೂ ಪಾರದರ್ಶಕ ಪರೀಕ್ಷೆಗೆ ಜಿಲ್ಲಾಡಳಿತ ಸರ್ವ ಸಿದ್ಧತೆ; ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ


ಶಿವಮೊಗ್ಗ, ಏ.18: ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಏಪ್ರಿಲ್ 23 ಮತ್ತು 24 ರಂದು ಜಿಲ್ಲೆಯಾದ್ಯಂತ ನಡೆಯಲಿದ್ದು, ಪರೀಕ್ಷೆಯನ್ನು ಶಿಸ್ತುಬದ್ಧವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತವು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಶಿವಮೊಗ್ಗದ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಪರೀಕ್ಷಾ ನಿಯೋಜಿತ ಅಧಿಕಾರಿಗಳೊಂದಿಗೆ ಸಿಇಟಿ ಪರೀಕ್ಷೆಯ ಸಿದ್ಧತೆ ಕುರಿತು ಚರ್ಚಿಸಿ ಅವರು ಮಾತನಾಡಿದರು. ಪರೀಕ್ಷೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುತ್ತಿದ್ದು, ಪರೀಕ್ಷೆಯು ಯಾವುದೇ ಅಕ್ರಮವಿಲ್ಲದೆ ಸುಗಮವಾಗಿ ನಡೆಯಲು ಜಿಲ್ಲಾಡಳಿತ ವಿವಿಧ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದರು.

29 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ

ಈ ಬಾರಿ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 29 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ಶಿವಮೊಗ್ಗ ನಗರದಲ್ಲಿ 21, ಭದ್ರಾವತಿಯಲ್ಲಿ 05 ಹಾಗೂ ಸಾಗರದಲ್ಲಿ 03 ಕೇಂದ್ರಗಳು ಸ್ಥಾಪಿಸಲಾಗಿದೆ. ಒಟ್ಟು 9,864 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಶಿವಮೊಗ್ಗದಿಂದ 7,456, ಭದ್ರಾವತಿಯಿಂದ 1,120 ಮತ್ತು ಸಾಗರ ತಾಲೂಕಿನಿಂದ 1,288 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಸಂಪೂರ್ಣ ವರದಿ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪರೀಕ್ಷಾ ನಿಯೋಜಿತ ಅಧಿಕಾರಿಗಳೊಂದಿಗೆ ಸಿಇಟಿ ಪರೀಕ್ಷೆಯ ಸಿದ್ಧತೆ ಕುರಿತು ಚರ್ಚಿಸಿ ಅವರು ಮಾತನಾಡಿದರು. ಪರೀಕ್ಷೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುತ್ತಿದ್ದು, ಯಾವುದೇ ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

29 ಪರೀಕ್ಷಾ ಕೇಂದ್ರಗಳು

ಈ ಬಾರಿ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 29 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಶಿವಮೊಗ್ಗ ನಗರದಲ್ಲಿ 21, ಭದ್ರಾವತಿಯಲ್ಲಿ 05 ಮತ್ತು ಸಾಗರದಲ್ಲಿ 03 ಪರೀಕ್ಷಾ ಕೇಂದ್ರಗಳು ಸ್ಥಾಪಿಸಲಾಗಿದೆ. ಒಟ್ಟು 9,864 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಶಿವಮೊಗ್ಗದಿಂದ 7,456, ಭದ್ರಾವತಿಯಿಂದ 1,120 ಮತ್ತು ಸಾಗರ ತಾಲೂಕಿನಿಂದ 1,288 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ನಿಷೇಧಾಜ್ಞೆ ಜಾರಿ

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ದಂಡ ಸಂಹಿತೆ ಕಲಂ 144 ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ವೇಳೆಯಲ್ಲಿ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಹಾಗೂ ಸೈಬರ್ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ಪ್ರಶ್ನೆ ಪತ್ರಿಕೆಗಳ ಸಾಗಾಣಿಕೆ ಮತ್ತು ಕೇಂದ್ರಗಳ ಭದ್ರತೆಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಸೂಚಿಸಲಾಗಿದೆ.

ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ

ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯಲು ಶಿವಮೊಗ್ಗ ಜಿಲ್ಲಾ ಪಂಚಾಯತ್ ವತಿಯಿಂದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.

ಪ್ರಶ್ನೆ ಪತ್ರಿಕೆ ಸಾಗಾಣಿಕೆ

ಪ್ರಶ್ನೆ ಪತ್ರಿಕೆಗಳ ವಿತರಣೆಗಾಗಿ ಒಟ್ಟು 10 ಮಾರ್ಗಗಳನ್ನು ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗದಲ್ಲಿ 06, ಭದ್ರಾವತಿಯಲ್ಲಿ 02 ಮತ್ತು ಸಾಗರದಲ್ಲಿ 02 ಮಾರ್ಗಗಳಿವೆ. ಸಾಗಾಣಿಕೆಯ ಮೇಲ್ವಿಚಾರಣೆಗೆ ಮೂವರು ಸದಸ್ಯರ ಸಮಿತಿಯನ್ನು ನೇಮಿಸಲಾಗಿದೆ. ಜೊತೆಗೆ ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಗಾಗಿ ಮುಖ್ಯ ಅಧೀಕ್ಷಕರು, ವೀಕ್ಷಕರು ಹಾಗೂ ಜಾಗೃತ ದಳದ ಸದಸ್ಯರನ್ನು ನಿಯೋಜಿಸಲಾಗಿದೆ. ಪ್ರತಿ ಕೇಂದ್ರಕ್ಕೂ ಹೊಸದಾಗಿ ‘ಡ್ರೆಸ್ ಕೋಡ್ ಅಧಿಕಾರಿ’ಯನ್ನು ನೇಮಕ ಮಾಡಲಾಗಿದೆ.

ಮೂಲಭೂತ ಸೌಲಭ್ಯ

ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನಿರಂತರ ವಿದ್ಯುತ್ ಪೂರೈಕೆಗೆ ಮೆಸ್ಕಾಂ ಇಲಾಖೆಗೆ ಸೂಚಿಸಲಾಗಿದೆ. ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಸ್ಕ್ಯಾನ್ ಮಾಡಿ ಪರಿಶೀಲಿಸುವ ಆಧುನಿಕ ವ್ಯವಸ್ಥೆ ಕೂಡ ಮಾಡಲಾಗಿದೆ.

ಪರೀಕ್ಷಾ ಕೇಂದ್ರಗಳಿಗೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಹೋಗಲು ಅವಕಾಶವಿಲ್ಲ. ಅಭ್ಯರ್ಥಿಗಳಿಗೆ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ವಿಕಲಚೇತನ ಅಭ್ಯರ್ಥಿಗಳಿಗೆ ನೆಲ ಅಂತಸ್ತಿನಲ್ಲಿ ಪರೀಕ್ಷೆ ಬರೆಯಲು ವಿಶೇಷ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಾರಿಯಪ್ಪ, ಡಿಡಿಪಿಯು ಚಂದ್ರಪ್ಪ ಗುಂಡಪ್ಪಳ್ಳಿ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.


ವರದಿ: ಡಿ.ಪಿ. ಅರವಿಂದ್
ವೆಬ್‌ಸೈಟ್: F7news.in


Post a Comment

Previous Post Next Post