ಕುಂಸಿ ಉಪವಿಭಾಗದ ಹಾರ್ನಳ್ಳಿ ಶಾಖಾ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ – ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಸ್ಥಗಿತ
ಶಿವಮೊಗ್ಗ, ಏಪ್ರಿಲ್ 6:
ಕುಂಸಿ ಉಪವಿಭಾಗದ ಹಾರ್ನಳ್ಳಿ ಶಾಖಾ ವ್ಯಾಪ್ತಿಯಲ್ಲಿ ಎಲ್.ಟಿ ರೀ-ಕಂಡರಿಂಗ್ ಸಂಬಂಧಿಸಿದ ತುರ್ತು ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 8ರಂದು ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಪ್ರದೇಶಗಳಲ್ಲಿ ಈ ಕಾಮಗಾರಿಯನ್ನು ನಿರ್ವಹಿಸಲಾಗುತ್ತಿರುವುದರಿಂದ ಆ ವ್ಯಾಪ್ತಿಯ ಗ್ರಾಮಗಳಿಗೆ ವಿದ್ಯುತ್ ಸರಬರಾಜು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ವಿಠಗೊಂಡನಕೊಪ್ಪ, ವೀರಣ್ಣನಬೇನವಳ್ಳಿ, ಕೆಸುವಿನ ಕಟ್ಟೆ, ಸೇವಲಾಲ್ ನಗರ, ಯರೆಕೊಪ್ಪ, ಚಾಮೇನಹಳ್ಳಿ, ನಾಗರಭಾವಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಏಪ್ರಿಲ್ 8ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ತಂತಿಗಳ ರೀ-ಕಂಡರಿಂಗ್ ಮತ್ತು ಸಂಬಂಧಿತ ನಿರ್ವಹಣಾ ಕಾಮಗಾರಿಗಳನ್ನು ಸುರಕ್ಷಿತವಾಗಿ ಮತ್ತು ವೇಗವಾಗಿ ಪೂರ್ಣಗೊಳಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಅದರಿಂದ ಈ ಅವಧಿಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲದ ಕಾರಣ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.
ವರದಿ: ಡಿ.ಪಿ ಅರವಿಂದ್ ಎಫ್7ನ್ಯೂಸ್ ಶಿವಮೊಗ್ಗ
