ಶಿವಮೊಗ್ಗ ಜಿಲ್ಲಾ ಮೋಚಿಗರ ಸಂಘದಿಂದ ಮೊದಲ ವರ್ಷದ ಪ್ರತಿಭಾ ಪುರಸ್ಕಾರ
ಶಿವಮೊಗ್ಗ: 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಮೋಚಿಗರ ಸಂಘದ ವತಿಯಿಂದ 10ನೇ ತರಗತಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಐವರು ವಿದ್ಯಾರ್ಥಿಗಳಿಗೆ ಮೊದಲ ವರ್ಷದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ನಗರದ ಅಶ್ವತ್‌ನಗರದಲ್ಲಿರುವ ಶಿವಮೊಗ್ಗ ಜಿಲ್ಲಾ ಮೋಚಿಗರ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಂಚನ ಜಿ., ಪ್ರಾರ್ಥನಾ ಎ., ತನು ಎನ್., ಆದ್ಯ ಎಸ್.ಜಿ. ಹಾಗೂ ನಂದಿತಾ ಆರ್. ಅವರನ್ನು ಸನ್ಮಾನಿಸಿ ಪ್ರೋತ್ಸಾಹ ಧನ ವಿತರಿಸಲಾಯಿತು.
ಕಾರ್ಯಕ್ರಮವು ಮೋಚಿಗರ ಸಂಘದ ಅಧ್ಯಕ್ಷ ಎಸ್. ರಾಜು, ಜಿಲ್ಲಾ ಗೌರವಾಧ್ಯಕ್ಷ ಎಂ. ಶಿವಣ್ಣ ಹಾಗೂ ಮಾಜಿ ಅಧ್ಯಕ್ಷ ಎಸ್. ಮಲ್ಲಪ್ಪ ಅವರ ನೇತೃತ್ವದಲ್ಲಿ ನಡೆಯಿತು. ಎಸ್.ಪಿ. ಶಿವಕುಮಾರ್ ಅವರು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಸ್. ರಾಜು ಅವರು ಸಂಘದ ಕಟ್ಟಡದ ಅಭಿವೃದ್ಧಿಗಾಗಿ ₹25,000 ದೇಣಿಗೆ ನೀಡಿದರು. ಮಾತನಾಡಿದ ಅವರು, ಸಂಘದ ಅಭಿವೃದ್ಧಿ ಹಾಗೂ ಸಮಾಜದ ಶೈಕ್ಷಣಿಕ ಪ್ರಗತಿಗಾಗಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳ ಪೋಷಕರು, ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

